Site icon Suddi Belthangady

ಅಳದಂಗಡಿ: ಸರಕಾರಿ ಪ್ರೌಢಶಾಲೆಯಲ್ಲಿ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ

ಅಳದಂಗಡಿ: ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆಯನ್ನು ಸಭಾಧ್ಯಕ್ಷೆ ಮುಖ್ಯ ಶಿಕ್ಷಕಿ ಶಾಂತಿ ಮರಿಯಾ ಸಲ್ದಾನ ಇವರ ನೇತೃತ್ವದಲ್ಲಿ ಆಚರಿಸಲಾಯಿತು.

ಗಣಿತ ಶಿಕ್ಷಕ ಉಮೇಶ್ ಗೌಡ ಇವರು ಗಾಂಧೀಜಿ ಹಾಗೂ ಶಾಸ್ತ್ರಿಯವರ ನಡೆ-ನುಡಿಯ ಬಗ್ಗೆ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಚಂದ್ರಶೇಖರ್ ರಾವ್, ಪ್ರೇಮಲತಾ, ಶೋಭಾ, ಮತ್ತಿತರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Exit mobile version