ಕಲ್ಮಂಜ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2024-25ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಅ.15ರಿಂದ ಅ.21ರವರೆಗೆ ನಡೆಯಲಿದೆ. ಅಪರಾಹ್ನ 4:30ಕ್ಕೆ ಶಿಬಿರದ ಉದ್ಘಾಟನಾ ಸಮಾರಂಭವು ನಡೆಯಲಿದ್ದು, ಸರಕಾರಿ ಪ್ರೌಢಶಾಲೆ ಕಲ್ಮಂಜದ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟಿ ಉದ್ಘಾಟನೆಯನ್ನು ಮಾಡಲಿದ್ದಾರೆ.
ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್ ಇದರ ಸದಸ್ಯೆ ಪ್ರೀತಿತಾ ಧರ್ಮವಿಜೇತ್ ವಹಿಸಲಿದ್ದಾರೆ. ಸರಕಾರಿ ಪ್ರೌಢಶಾಲೆ ಕಲ್ಮಂಜದ ಮುಖ್ಯೋಪಾಧ್ಯಾಯೆ ಪೂರ್ಣಿಮ, ಕಲ್ಮಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ, ಕಲ್ಮಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪೂರ್ಣಿಮಾ, ಕಲ್ಮಂಜ ಹಾ.ಉ.ಸ ಸಂಘದ ಅಧ್ಯಕ್ಷ ಜಯಂತ ಗೌಡ, ಸರಕಾರಿ ಪ್ರೌಢಶಾಲೆ ಕಲ್ಮಂಜದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವೀನ ಗೌಡ, ನಿಡಿಗಲ್ ಬದ್ರಿಯಾ ಜುಮ್ಮಾ ಮಸೀದಿಯ ಅಧ್ಯಕ್ಷ ಜ| ಮುಹಮ್ಮದ್ ಮುಜೀದ್, ಓಡಲ ಶ್ರೀ ವ್ಯಾಘ್ರ ಚಾಮುಂಡಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಸೀತರಾಮ ಶೆಟ್ಟಿ, ಮುಂಡಾಜೆ ಕ್ಲಸ್ಟರ್ ನ ಸಿ ಆರ್ ಪಿ ಪ್ರಶಾಂತ್, ಉಜಿರೆ ಚರ್ಚ್ ಪಾಲನಾ ಮಂಡಳಿ ಸಂತ ಅಂತೋನಿ ದೇವಾಲಯದ ಉಪಾಧ್ಯಕ್ಷ ಅಂತೋನಿ ಫೆರ್ನಾಂಡಿಸ್ , ಕಲ್ಮಂಜ ಸರಕಾರಿ ಪ್ರೌಢಶಾಲೆಯ ಎಸ್ ಡಿ ಎಂ ಸಿ ಯ ಪೂರ್ವಾಧ್ಯಕ್ಷ ಮೋನಪ್ಪ ಟಿ. ಭಾಗವಹಿಸಲಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಸಹ ಶಿಬಿರಾಧಿಕಾರಿಗಳು, ಕಛೇರಿ ಸಿಬ್ಬಂದಿಗಳು ಹಾಗೂ ಬೋಧಕೇತರ ಸಿಬ್ಬಂದಿಗಳ ಸಹಕಾರದಲ್ಲಿ ಶಿಬಿರ ನಡೆಯಲಿದೆ ಎಂದು ಎನ್ಎಸ್ಎಸ್ ಶಿಬಿರಾಧಿಕಾರಿ ಬಿ ಎ ಶಮಿವುಲ್ಲಾ ತಿಳಿಸಿದರು.