ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು, ಬಂಟರ ಯಾನೆ ನಾಡವರ ಮಾತೃ ಸಂಘ
ಮಂಗಳೂರು, ಬಂಟರ ಸಂಘ ಬೆಂಗಳೂರು,ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇದರ ಸಹಭಾಗಿತ್ವದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವು ಅ.13ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉರ್ದ್ಘಾಟನೆಯನ್ನು ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಬಿ.ಜಯಂತ್ ಶೆಟ್ಟಿ ಭಂಡಾರಿಗುಡ್ಡೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮಂಗಳೂರು ಜಾಗತಿಕ ಬಂಟರ ಸಂಘದ ಒಕ್ಕೂಟದ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತು, ಬೆಂಗಳೂರು ಬಂಟರ ಸಂಘದ ವಿಧ್ಯಾರ್ಥಿ ನಿಧಿಯ ಸಂಚಾಲಕರ ಉಮೇಶ್ ಶೆಟ್ಟಿ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ವಿವೇಕ್ ಆಳ್ವ, ವಿದ್ಯಾರ್ಥಿ ನಿಧಿ ಸಂಚಾಲಕ ಅಜಿತ್.ಜಿ ಶೆಟ್ಟಿ, ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಉಪಾಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ, ನವೀನ್ ಸಾಮಾನಿ, ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ಧಾ, ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಾತೃ ಸಂಚಾಲಕರಾದ ಎಂ ಜಯರಾಮ್ ಭಂಡಾರಿ ಧರ್ಮಸ್ಥಳ, ಮಹಿಳಾ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮಿಎಸ್.ಸಾಮಾನಿ, ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳನ್ನು ಗೌರವಿಸಲಾಯಿತು. ಯುವ ವಿಭಾಗ, ಮಹಿಳಾ ವಿಭಾಗ ಪದಾಧಿಕಾರಿಗಳನ್ನು ಗೌರವಿಸಲಾಯಿತು.
ಎಂ.ಸಿ.ಆರ್ ಶೆಟ್ಟಿ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಇಬ್ಬರು ವಿದ್ಯಾರ್ಥಿಗಳಿಗೆ ದತ್ತು ಸ್ವೀಕಾರ ಕಾರ್ಯಕ್ರಮ ನಡೆಯಿತು. ನಂತರ ಸಾಂಕೇತಿಕವಾಗಿ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ ನಡೆಯಿತು. ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.ಬಂಟರ ಸಮಾಜದಲ್ಲಿ ಸೇವಾ ಸಹಕಾರಿ ಕ್ಷೇತ್ರದಲ್ಲಿ ಸಾಧನೆಗೈದ ಅಧ್ಯಕ್ಷರಿಗೆ ಗೌರವಿಸಲಾಯಿತು.
ನಂತರ ವಿದ್ಯಾರ್ಥಿ ನಿಧಿಗೆ 1 ಲಕ್ಷ ಠೇವಣಿ ಇಟ್ಟ ವಿಜಯ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಗುರುವಾಯನಕೆರೆ, ಶ್ರೀಮತಿ ಕಾಶಿ ಶೆಟ್ಟಿ ಮತ್ತು ಮಕ್ಕಳು ನವಶಕ್ತಿ ಗುರುವಾಯನಕೆರೆ,ಜಯಂತ ಶೆಟ್ಟಿ ಕುಂಟಿನಿ ಉಜಿರೆ, ಶ್ರೀನಾಥ್ ಹೆಗ್ಡೆ ಮಂಗಳೂರು,ಹರಿಪ್ರಕಾಶ್ ಶೆಟ್ಟಿ ಕಾರ್ಕಳ ಇವರನ್ನು ಈ ಸಂದರ್ಭದಲ್ಲಿ ಗುರುತಿಸಲಾಯಿತು.
ಪ್ರಾರ್ಥನೆಯನ್ನು ಭಾಸ್ಕರ ಶೆಟ್ಟಿ ಕಾರ್ಯಾಣ ಮತ್ತು ತಂಡ ಮಾಡಿದರು.
ವಿದ್ಯಾರ್ಥಿ ನಿಧಿ ಸಂಚಾಲಕ ಅಜಿತ್ ಶೆಟ್ಟಿ ಸ್ವಾಗತಿಸಿ,
ಪ್ರಕಾಶ್ ಶೆಟ್ಟಿ ನೊಚ್ಚ,ಕಿರಣ್ ಕುಮಾರ್ ಶೆಟ್ಟಿ, ವಸಂತ ಶೆಟ್ಟಿ ಶ್ರದ್ಧಾ, ರಾಜು ಶೆಟ್ಟಿ ಬೆಂಗತ್ಯಾರು ಕಾರ್ಯಕ್ರಮ ನಿರೂಪಿಸಿದರು.
ನವೀನ್ ಸಾಮಾನಿ ಕರಂಬಾರುಬೀಡು ಧನ್ಯವಾದವಿತ್ತರು.