ನೆರಿಯ: ಗಂಡಿಬಾಗಿಲು ಸಿಯೋನ್ ಅಶ್ರಮ ಟ್ರಸ್ಟ್ ನಲ್ಲಿ 12.ರಂದು ದಸರಾ ಹಬ್ಬವನ್ನು ಸಂಭ್ರಮದಿಂದ ಆಶ್ರಮ ನಿವಾಸಿಗಳೊಂದಿಗೆ ಆಚರಿಸಲಾಯಿತು.
ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ.ಯು.ಸಿ.ಪೌಲೋಸ್ ಎಲ್ಲರಿಗೂ ಶುಭಹಾರೈಸುತ್ತಾ ಮಾತನಾಡಿ, ದಸರಾ ಹಬ್ಬವನ್ನು ಯಾವುದೇ ಜಾತಿ-ಮತ, ಭೇದ-ಭಾವವಿಲ್ಲದೆ ಎಲ್ಲರೂ ಒಟ್ಟಾಗಿ ಆಚರಿಸಿ, ಸಂತೋಷವನ್ನು ಹಂಚಿಕೊಳ್ಳುವ ನಾಡಹಬ್ಬವಾಗಿದೆ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಪ್ರಾಮುಖ್ಯತೆಯನ್ನು ಹೊಂದಿರುವ ಬಹುಮುಖಿ ಹಬ್ಬವಾಗಿದೆ ಎಂದರು. ಅತಿಥಿಗಳಾಗಿ ಸಂಸ್ಥೆಯ ವೈದ್ಯರಾದ ಡಾ. ಶಿವಾನಂದ ಸ್ವಾಮಿಯವರು, ನವರಾತ್ರಿಯಲ್ಲಿ ನವದುರ್ಗೆಯರನ್ನು ಆರಾಧಿಸುವ ರೀತಿ ಮತ್ತು ಮಹತ್ವದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.
ಸಂಸ್ಥೆಯ ಟ್ರಸ್ಟಿ ಸದಸ್ಯೆ ಮೇರಿ ಯು.ಪಿ, ಆಶ್ರಮ ನಿವಾಸಿಗಳಾದ ರವಿ ಮತ್ತು ಸರಸ್ವತಿಪ್ರಿಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಂತರ ಆಶ್ರಮ ನಿವಾಸಿಗಳಿಂದ ಮತ್ತು ಸಿಬ್ಬಂದಿ ವರ್ಗದವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ದಸರಾ ಹಬ್ಬದ ಪ್ರಯುಕ್ತ ಆಶ್ರಮನಿವಾಸಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗ, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ದಿನವತಿ ಕಾರ್ಯಕ್ರಮ ನಿರೂಪಿಸಿದರು.