Site icon Suddi Belthangady

ಬೆಳ್ತಂಗಡಿ: ತ್ರಿ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

ಬೆಳ್ತಂಗಡಿ: ಬಸ್ ನಿಲ್ದಾಣದ ಸಮೀಪವೇ ಇರುವ ತ್ರಿ ಸ್ಟಾರ್ ವೈನ್ ಶಾಪ್ ಗೆ ಬೀಗ ಒಡೆದು ನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿಗಳನ್ನು ಕಳ್ಳತನ ಮಾಡಿದ ಘಟನೆ ಅ. 13ರಂದು ಭಾನುವಾರ ರಾತ್ರಿ ಸಂಭವಿಸಿದೆ.

ಅಂಗಡಿಯ ಹೊರಗಿನ ಬೀಗ ಒಡೆದು ಶಟರ್ ತೆಗೆದು ಒಳಗೆ ನುಗ್ಗಿದ ಕಳ್ಳರು ಅಂಗಡಿಯ ಒಳಗೆ ಇರಿಸಲಾಗಿದ್ದ ಸುಮಾರು ಆರುಸಾವಿರಕ್ಕೂ ಹೆಚ್ಚು ನಗದನ್ನು ಅಪಹರಿಸಿರುವುದಾಗಿ ತಿಳಿದು ಬಂದಿದೆ.

ಮದ್ಯದ ಬಾಟಲಿಗಳನ್ನೂ ಕಳ್ಳತನ ಮಾಡಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಾಗಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Exit mobile version