ಉಜಿರೆ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2024-25ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಅ.15ರಂದು ನಡೆಯಿತು. ಸರಕಾರಿ ಪ್ರೌಢಶಾಲೆ ಕಲ್ಮಂಜದ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟಿ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟನೆಯನ್ನು ಮಾಡಿ, ಹಿತನುಡಿಗಳನ್ನಾಡಿದರು. ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್ ನ ಸದಸ್ಯೆ ಪ್ರೀತಿತಾ ಧರ್ಮವಿಜೇತ್ ವಹಿಸಿಕೊಂಡಿದ್ದರು. ಗೌರವ ಉಪಸ್ಥಿತಿಯನ್ನು ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ, ಗುರುದೇವ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ವಹಿಸಿಕೊಂಡಿದ್ದರು.
ಮುಖ್ಯ ಅತಿಥಿಗಳಾಗಿ ಕಲ್ಮಂಜ ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯೆ ಪೂರ್ಣಿಮ, ಕಲ್ಮಂಜ ಹಾ.ಉ.ಸ ಸಂಘದ ಅಧ್ಯಕ್ಷ ಜಯಂತ ಗೌಡ, ಓಡಲ ಶ್ರೀ ವ್ಯಾಘ್ರ ಚಾಮುಂಡಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಸೀತಾರಾಮ ಶೆಟ್ಟಿ, ಕಲ್ಮಂಜ ಸರಕಾರಿ ಪ್ರೌಢಶಾಲೆ ಎಸ್ ಡಿ ಎಂ ಸಿ ಪೂರ್ವಾಧ್ಯಕ್ಷ ಮೋನಪ್ಪ ಶೆಟ್ಟಿ, ದೊಂಪದಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಸುರೇಶ್ ಆಚಾರ್ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಸಹ ಶಿಬಿರಾಧಿಕಾರಿಗಳು, ಕಛೇರಿ ಸಿಬ್ಬಂದಿಗಳು ಹಾಗೂ ಬೋಧಕೇತರ ಸಿಬ್ಬಂದಿಗಳ ಸಹಕಾರದಲ್ಲಿ ಶಿಬಿರದ ಉದ್ಘಾಟನೆಯು ಯಶಸ್ವಿಯಾಗಿ ನೆರವೇರಿತು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಬಿ.ಎ ಶಮಿವುಲ್ಲಾ ಸ್ವಾಗತಿಸಿ, ಉಪನ್ಯಾಸಕ ಸತೀಶ್ ಸಾಲಿಯಾನ್ ವಂದಿಸಿದರು. ನಿರೂಪಣೆಯಲ್ಲಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ವೇತಾ ಸಹಕರಿಸಿದರು.