Site icon Suddi Belthangady

ಕೊಕ್ರಾಡಿ: ಓಮಿನಿ-ಬೈಕ್ ಮುಖಾ ಮುಖಿ ಡಿಕ್ಕಿ- ಬೈಕ್ ಸವಾರನಿಗೆ ಗಂಭೀರ ಗಾಯ

ಕೊಕ್ರಾಡಿ: ಕೊಕ್ರಾಡಿ ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮಿನಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ಅ.16ರಂದು ಸಂಭವಿಸಿದೆ. ಗಾಯಾಳು ವ್ಯಕ್ತಿಯನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ.

ಬೈಕ್ ಹಾಗೂ ಓಮಿನಿ ಕಾರು ಮುಖಾ ಮುಖಿ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಕ್ರಾಡಿ ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿದೆ, ಅಪಘಾತಗಳನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸುತ್ತಿದ್ದಾರೆ.

Exit mobile version