ಕೊಕ್ರಾಡಿ: ಅಕ್ಕಮ್ಮರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

0

ಕೊಕ್ರಾಡಿ: ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಅಕ್ಕಮ್ಮ ಇವರಿಗೆ ಬೆಂಗಳೂರು ಸೂರ್ಯ ಫೌಂಡೇಶನ್, ಬೆಂಗಳೂರು ಸ್ಪಾರ್ಕ್ ಅಕಾಡೆಮಿ ಸಹಯೋಗ, INDOGLOBE INSTITUTIONS BANGALORE ಸಹಕಾರ, ಮೈಸೂರು ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್, ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಅ.15ರಂದು ಶಿಕ್ಷಣ ರತ್ನ ಪ್ರಶಸ್ತಿ 2024 ನೀಡಿ ಗೌರವಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಾ ಉತ್ತಮ ಸಾಧಕರಾಗಿ ಶಿಷ್ಟ ಶಿಕ್ಷಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಇವರ ಸೇವೆಯನ್ನು ಪರಿಗಣಿಸಿ ಬೆಂಗಳೂರಿನ ಇಂಡೋ ಗ್ಲೋಬ್ ಪಿ.ಯು.ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ 2024ನೇ ಸಾಲಿನ ಶಿಕ್ಷಣ ರತ್ನ (ಪ್ರೌಢಶಾಲಾ ವಿಭಾಗ) ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

LEAVE A REPLY

Please enter your comment!
Please enter your name here