ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ತಾಲೂಕು ಆಡಳಿತ ಸೌಧದಲ್ಲಿ ಅ.17ರಂದು ನಡೆಯಿತು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ, ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆ ವಹಿಸಿದ್ದರು. ಡಾ. ಹರ್ಷಿಯಾ ವಾಲ್ಮೀಕಿಯ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಇಒ ಭವಾನಿ ಶಂಕರ್ ಎನ್., ಲೋಕೋಪಯೋಗಿ ಇಲಾಖೆಯ ಎಇಇ ಬಕ್ಕಪ್ಪ, ಪ್ರಭಾರ ಬಿಒ ತಾರಕೇಸರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೇಮಿರಾಜ್ ಮಿತ್ತಬಾಗಿಲು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ಸ್ವಾಗತಿಸಿ, ಹಾಸ್ಟೆಲ್ ಮೇಲ್ವಿಚಾರಕ ಬಸವರಾಜ್ ವಂದಿಸಿ, ವಾರ್ಡನ್ ಹೇಮಲತಾ ನಿರೂಪಿಸಿದರು.