ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆ- ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರ ಮತಯಾಚನೆ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕರಾದ ಹರೀಶ್ ಪೂಂಜಾ ನೇತೃತ್ವದಲ್ಲಿ ಬೆಳ್ತಂಗಡಿ ಮಂಡಲ ಹಾಗೂ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾಯಿತ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಾಜಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಂಡಲ‌ ಉಪಾಧ್ಯಕ್ಷರುಗಳಾದ ಚೆನ್ನಕೇಶವ ಮುಂಡಾಜೆ, ಕೊರಗಪ್ಪ ಗೌಡ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಗೌಡ ಕೊಯಿಲ, ಪದಾಧಿಕಾರಿಗಳು, ಪಂಚಾಯತ್ ಸದಸ್ಯರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here