ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

0

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ನದಿಯ ಸೇತುವೆಯ ದೊಂಡೋಲೆ ಕ್ರಾಸ್ ಬಳಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಅ.18ರಂದು ನಡೆದಿದೆ.

ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಹೆಂಗಸಿನ ಮೃತದೇಹವಾಗಿದ್ದು, ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಮೃತ ಮಹಿಳೆಯ ವಾರೀಸುದಾರರ ಪತ್ತೆಗಾಗಿ ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here