Site icon Suddi Belthangady

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಮಾಸಿಕ ಬೆಂಬಲ ಸಭೆ- ಮಾಹಿತಿ

ಬೆಳ್ತಂಗಡಿ: ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಅ.19ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು.

ಬಂಗಾಡಿ ಮರಿಯಾಂಬಿಕಾ ಚರ್ಚ್ ನ ಧರ್ಮಗುರು ವಂದನೀಯ ಫಾದರ್ ಸೆಬಾಸ್ಟಿಯನ್ ಚೆಲಕ್ಕಪಳ್ಳಿ ಆಗಮಿಸಿ ಯಾವುದೇ ಸರ್ಕಾರದ ಅನುದಾನವಿಲ್ಲದೆ ಈ ಕಾರ್ಯಕ್ರಮ ನಡೆಯುತ್ತಿರುವುದು ಶ್ಲಾಘನೀಯ, ಇಂತಹ ಕಾರ್ಯಕ್ರಮಕ್ಕೆ ನಾವೆಲ್ಲರೂ ಕೈಜೋಡಿಸೋಣ ಎಂದು ಮಾತನಾಡಿ, ಪೌಷ್ಟಿಕ ಆಹಾರದ ಕಿಟ್ ವಿತರಿಸಿದರು. ಕಾಂಚಾಲ್ ಅರ್ಚನಾ ಸ್ವಸಹಾಯ ಸಂಘದ ಅಧ್ಯಕ್ಷೆ ಏಲಿಯ ಜೋಸ್ ಹಾಗೂ ಸಂಘದ ಸದಸ್ಯರ ನೇತೃತ್ವದಲ್ಲಿ ಪೌಷ್ಟಿಕ ಆಹಾರದ ಕಿಟ್ ವಿತರಿಸಿ, 10,000ರೂ. ಅನ್ನು ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮಕ್ಕೆ ನೀಡಿದರು. ಅರ್ಚನಾ ಸ್ವಸಹಾಯ ಸಂಘದ ಸದಸ್ಯೆ ಜಾನೆಟ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಪುಷ್ಪರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ವಂದನೀಯ ಫಾ. ಬಿನೋಯಿ ಎ.ಜೆ. “ದೇವಾಲಯಕ್ಕೆ ಹೋದರೆ ಕಣ್ಣು ಮುಚ್ಚಿ ನಿಲ್ಲಬೇಕು, ಗ್ರಂಥಾಲಯಕ್ಕೆ ಹೋದರೆ ಕಣ್ಣು ತೆರೆದು ನಿಲ್ಲಬೇಕು” ಎಂದು ತಿಳಿಸುತ್ತ ಈ ಕಾರ್ಯಕ್ರಮದ ಮೂಲಕ ಉತ್ತಮ ಅರಿವನ್ನು ಪಡೆದು ಮುನ್ನಡೆಯೋಣ ಎಂದು ಪ್ರಾಸ್ತಾವಿಕ ನುಡಿಯನ್ನಾಡಿದರು.

ನವ ಜೀವನ ಬೆಂಬಲ ಕಾರ್ಯಕ್ರಮದ ಸದಸ್ಯೆ ಪುಷ್ಪ ಪ್ರಾರ್ಥಿಸಿ, ಸಂಸ್ಥೆಯ ಸoಯೋಜಕಿ ಶ್ರೇಯಾ ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕರ್ತ ಜೋನ್ಸನ್ ವಂದಿಸಿದರು. ಕಾರ್ಯಕರ್ತ ಮಾರ್ಕ್ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Exit mobile version