Site icon Suddi Belthangady

ಬೆಳ್ತಂಗಡಿ: ಅ.21: ಸ್ಥಳೀಯ ಸಂಸ್ಥೆ ಕ್ಷೇತ್ರದ ಚುನಾವಣೆ, ತಾಲೂಕಿನಲ್ಲಿ 49 ಬೂತ್ ಗಳಲ್ಲಿ ಮತದಾನ, ಉಜಿರೆ ಸೂಕ್ಷ್ಮ ಮತಕಟ್ಟೆ

ಬೆಳ್ತಂಗಡಿ: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ
ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಪ ಚುನಾವಣೆಯು ಅ. 21ರಂದು ಸೋಮವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಬೆಳ್ತಂಗಡಿ ತಹಶೀಲ್ದಾರ್ ಪ್ರಥ್ವಿ ಸಾನಿಕಂ ಮಾಹಿತಿ ನೀಡಿದರು. ಅ. 20ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಚುನಾವಣಾ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಚುನಾವಣೆ ಪಾರದರ್ಶಕವಾಗಿ ನಡೆಯಬೇಕು ಎಂಬ ನಿಟ್ಟಿನಲ್ಲಿ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದು ಕೊಂಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಪಟ್ಟಣ ಪಂಚಾಯತ್‌ ಸೇರಿದಂತೆ 49 ಗ್ರಾಮ ಪಂಚಾಯತ್ ನ ಮತ ಕೇಂದ್ರಗಳಲ್ಲಿ ಮತದಾನ ನಡೆಯಲಿದ್ದು, ಕೇಂದ್ರದ ನೂರು ಮೀಟ‌ರ್ ಅಂತರದಲ್ಲಿ ವಾಹನ ಸಂಚಾರಕ್ಕೆ ಹಾಗೂ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ

ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ನ ಮತ ಕೇಂದ್ರವನ್ನು ಸೂಕ್ಷ್ಮ ಮತ ಕೇಂದ್ರ ಎಂದು ಗುರುತಿಸಲಾಗಿದೆ. ಮತ ಚಲಾಯಿಸಲು ಬರುವ ಮತದಾರರು ಮೊಬೈಲ್ ಪೆನ್ಸ್‌ ಸೇರಿದಂತೆ ಯಾವುದೇ ವಸ್ತುಗಳನ್ನು ಕೊಂಡು ಹೋಗಲು ಅವಕಾಶ ಇರುವುದಿಲ್ಲ. ಮತಗಟ್ಟೆ ಅಧಿಕಾರಿ ಮತ ಪತ್ರದೊಂದಿಗೆ ನೀಡುವ ನೇರಳೆ ಬಣ್ಣದ ಸ್ಕೆಚ್ ಪೆನ್ಸ್ ನಲ್ಲಿ ಮಾತ್ರ ಮತ ಚಲಾಯಿಸಲು ಅವಕಾಶ ಇರುತ್ತದೆ ಎಂದು ತಿಳಿಸಿದರು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಈಗಾಗಲೇ ಪೊಲೀಸ್‌ ಇಲಾಖೆ ಕ್ರಮಗಳನ್ನು ಕೈಗೊಂಡಿದೆ ಎಂದು ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟ‌ರ್ ನಾಗೇಶ್ ಕದ್ರಿ ತಿಳಿಸಿದರು.

Exit mobile version