ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಕರ್ನಾಟಕ ಸರಕಾರ ಹಾಗೂ ಶ್ರೀ ರಾಮಕೃಷ್ಣ ವಿದ್ಯಾಶಾಲಾ ಮೈಸೂರು ಸಹಯೋಗದೊಂದಿಗೆ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ತಂಡ ದ್ವಿತೀಯ ಸ್ಥಾನವನ್ನು ಗಳಿಸಿ ಸುಮಿತ್ ಎಂ. ಆರ್. ಇವರು ಹರಿಯಾಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಉಜಿರೆ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ಕ್ರಿಸ್ ಅಂಜನ್ ಬ್ಯಾಪ್ಟಿಸ್ಟ್, ಸುಮಿತ್ ಎಂ.ಆರ್., ಮಂಗಳೂರು ಸೈಂಟ್ ಅಲೋಶಿಯಸ್ ಪ.ಪೂ ಕಾಲೇಜಿನ ಅನ್ಸುಲ್, ಪುತ್ತೂರು ಸೈಂಟ್ ಫಿಲೋಮಿನಾ ಪ.ಪೂ ಕಾಲೇಜಿನ ಲಿಖಿತ್, ಬಂಟ್ವಾಳ ತುಂಬೆ ಪ.ಪೂ ಕಾಲೇಜಿನ ವಾಸುಕಿ ಅಭಯ ಶರ್ಮ, ತಂಡ ವ್ಯವಸ್ಥಾಪಕರಾಗಿ ಉಜಿರೆ ಎಸ್.ಡಿ.ಎಂ. ಕಾಲೇಜಿನ ಮೋಹಿನಿ ಹಾಗೂ ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ನವೀನ್ ಕುಮಾರ್ ಭಾಗವಹಿಸಿದ್ದರು.