ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅ.31ರಂದು ನಡೆಯುವ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ 2024ರ ಪೂರ್ವಭಾವಿ ಸಭೆಯು ಅ.21ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು.
ಶಾಸಕ ಹರೀಶ್ ಪೂಂಜಾ ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿ ಹಂಚಿಕೆ, ವಿವಿಧ ಕಾರ್ಯಕ್ರಮ ಆಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು, ವಿನಿತ್ ಸಾವ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಮುಂಡಾಜೆ, ತುಳಸಿ ಮಾಲಾಡಿ ಹಾಗೂ ಯುವಮೋರ್ಚಾ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.