ಉಜಿರೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ, ಉಜಿರೆ ಗ್ರಾಮ ಸಮಿತಿಯ 2024ನೇ ಸಾಲಿನ ವಾರ್ಷಿಕ ಮಹಾಸಭೆ ಅ. 27ರಂದು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಜರಗಲಿದೆ. ಸಭಾ ಕಾರ್ಯಕ್ರಮವನ್ನು ಕಡಬ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಸ್ಥಾಪಕ ಅಧ್ಯಕ್ಷ ಸುರೇಶ್ ಗೌಡ ಬೈಲು ಉದ್ಘಾಟಿಸಲಿದ್ದಾರೆ. ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಧರಣಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು ಭಾಗವಹಿಸಲಿದ್ದಾರೆ. ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಗೌಡ ಅಪ್ರಮೇಯ, ತಾಲೂಕು ಸಂಘದ ಮಹಿಳಾ ವೇದಿಕೆಯ ಅಧ್ಯಕ್ಷೆ
ಗೀತಾ ರಾಮಣ್ಣ ಗೌಡ, ತಾಲೂಕು ಯುವ ವೇದಿಕೆ ಕಾರ್ಯದರ್ಶಿ ಸುರೇಶ್ ಗೌಡ ಕೌಡಂಗೆ, ಸ್ಪಂದನ ಸೇವಾ ಸಂಘದ ಸಂಚಾಲಕ ಮೋಹನ ಗೌಡ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ಉಜಿರೆ ಇವರಿಗೆ ಗೌರವ ಸನ್ಮಾನ ನಡೆಯಲಿದೆ ಹಾಗೂ ಸಮಿತಿ ವತಿಯಿಂದ ಸ್ವಜಾತಿ ಭಾಂದವರಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು ಎಂದು ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಧರಣಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಯುವ ವೇದಿಕೆ ಅಧ್ಯಕ್ಷ ಸೋಮಶೇಖರ್ ಕೆ., ಮಹಿಳಾ ವೇದಿಕೆ ಅಧ್ಯಕ್ಷೆ ರಾಜೇಶ್ವರಿ ಚಂದ್ರಕಾಂತ್ ತಿಳಿಸಿದ್ದಾರೆ.