ಉಜಿರೆ: ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಇವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ’ ಪ್ರಶಸ್ತಿ

0

ಉಜಿರೆ: ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ‘ರಾಜ್ಯ ಮಟ್ಟದ ವಿದ್ಯಾರತ್ನ’ ಪ್ರಶಸ್ತಿಗೆ ಉಜಿರೆ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ ಸಹಶಿಕ್ಷಕಿ ರೇಷ್ಮಾ ಕೆ.ಎಸ್. ಆಯ್ಕೆಯಾಗಿದ್ದು, ಇವರಿಗೆ ಅ.21ರಂದು ಬೆಂಗಳೂರಿನ ಜುಬಿಲಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ರುಪ್ಸಾ ಸಂಭ್ರಮ 2024ರ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ, ಶಿಕ್ಷಕ ಕ್ಷೇತ್ರ ವಿಧಾನ ಪರಿಷತ್‌ ಸದಸ್ಯ ಎಸ್‌. ಎಲ್‌. ಭೋಜೇಗೌಡ, ರುಪ್ಸಾ ಸಂಘಟನೆಯ ರಾಜ್ಯಾಧ್ಯಕ್ಷ ಡಾ.ಹಾಲನೂರ್‌ ಲೇಪಾಕ್ಷ, ಉಪಾಧ್ಯಕ್ಷ ಡಾ.ಮಂಜುನಾಥ್ ರೇವಣ್‌ಕ‌ರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here