ಬೆಳ್ತಂಗಡಿ: ಏಕಾಏಕಿ ಮಾರುತಿ ಓಮ್ನಿ ಕಾರು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಅ.೨೨ರಂದು ರಾತ್ರಿ ಸಂಭವಿಸಿದೆ. ಕಾರು ಚಲಿಸುತ್ತಿರುವ ವೇಳೆಯೇ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು ಅದೃಷ್ಠವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಶಾರ್ಟ್ ಸರ್ಕ್ಯೂಟ್ನಿಂದ ಈ ರೀತಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯರು ಧಾವಿಸಿ ಬೆಂಕಿ ನಂದಿಸಿದ್ದಾರೆ.