ಉಜಿರೆ: ಮಂಗಳೂರು ಕಪಿತಾನಿಯ ಪ್ರೌಢಶಾಲೆಯಲ್ಲಿ ನಡೆದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(TCS) ಲಿಮಿಟೆಡ್ ಮತ್ತು ಕರ್ನಾಟಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ 25ನೇ ವರ್ಷದ ಜಿಲ್ಲಾ ಮಟ್ಟದ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧ. ಮಂ ಅನುದಾನಿತ ಸೆಕೆಂಡರಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ವಿನಾಯಕ ಹೆಗಡೆ ಮತ್ತು ಲಕ್ಷೀಶ ಇವರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅ.28ರಂದು ಮೈಸೂರಿನ ಶಾರದಾ ವಿಲಾಸ ಶಿಕ್ಷಣ ಸಂಸ್ಥೆಗಳ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
p>