Site icon Suddi Belthangady

ಬೆಳ್ತಂಗಡಿ: ಸಂತ ತೆರೇಸಾ ಕಾಲೇಜಿನಲ್ಲಿ ಮಾದಕ ವಸ್ತು ಸೇವನೆಯ ಜಾಗೃತಿ ಕಾರ್ಯಗಾರ

ಬೆಳ್ತಂಗಡಿ: ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜಿನ ಸಹಭಾಗಿತ್ವದಲ್ಲಿ ಅ.26ರಂದು ಮಾದಕ ವಸ್ತು ಸೇವನೆಯ ಜಾಗೃತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. 

ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಯೆನೆಪೋಯ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಜಾಸ್ಮಿನ್ ಸರಿತಾ ವಾಸ್ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸೇವನೆಯ ಬಗ್ಗೆ ಆಗುವಂತಹ ಅನಾಹುತಗಳ ಬಗ್ಗೆ ಮಾಹಿತಿಯನ್ನು ನೀಡಿ ಜಾಗೃತಿಯನ್ನು ಹೇಳಿದರು. ಕಾರ್ಯಗಾರದ ಸಂಯೋಜಕಿ ಯೆನೆಪೋಯ ಮೆಡಿಕಲ್ ಕಾಲೇಜಿನ ಅನುಷಾ ಶೆಟ್ಟಿ ಹೆಲ್ತ್ ಕಾರ್ಡ್ ಹಾಗೂ ಅದರಿಂದ ಆಗುವಂತಹ ಉಪಯೋಗಗಳನ್ನು ವಿವರಿಸಿದರು. ಇವರ ಜೊತೆ ಸಿಬ್ಬಂದಿ ವರ್ಗ ಅನಿಲ್ ಹಾಗೂ ಫೆಮಿ ಸಹಕರಿಸಿದರು.

ಕಾಲೇಜಿನ ಪ್ರಾಂಶುಪಾಲೆ ಭಗಿನಿ ಆರೋಗ್ಯರವರು ಹೂಗುಚ್ಛವನ್ನು ನೀಡಿ ಅತಿಥಿಗಳನ್ನು ಸ್ವಾಗತಿಸಿದರು. ಕಾಲೇಜಿನ ಉಪನ್ಯಾಸಕಿ ಝೀಟಾ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಉಪನ್ಯಾಸಕ ಪ್ರದೀಪ್ ವಂದನಾರ್ಪಣೆಗೈದರು. ಉಪನ್ಯಾಸಕಿ ಸುನಿತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಹಕರಿಸಿದರು. ಕಾರ್ಯಗಾರದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Exit mobile version