ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಅ.29ರಂದು ಬೆಳ್ತಂಗಡಿ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬೆಳ್ತಂಗಡಿ ವಕೀಲರ ಸಂಘ ಇದರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ನಡೆಯಿತು. ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ. ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಹಾಗೂ ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ. ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ವಕೀಲರಾದ ಸುವರ್ಣಲತಾ ಮಾಹಿತಿ ನೀಡಿದರು. ಸಂತ ತೆರೇಸಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ಯಾರಾ ಲೀಗಲ್ ವಾಲೆಂಟಿಯರ್ಸ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಮತ್ತು ಮಕ್ಕಳು ಭಾಗವಹಿಸಿದ್ದರು.