ಬೆಳ್ತಂಗಡಿ: ಸಂಗೀತ, ನೃತ್ಯ, ಕಲಾ ಪ್ರಕಾರಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಸೃಜನಶೀಲರಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ನ ಕಾರ್ಯದರ್ಶಿ ಸಂದೀಪ್ ರಾವ್ ಹೇಳಿದರು.
ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿದಾಗ ಸರ್ವತೋಮುಖ ಏಳಿಗೆಯೊಂದಿಗೆ ನೆಮ್ಮದಿಯ ಜೀವನವನ್ನು ಕಂಡುಕೊಳ್ಳಲು ಸಾಧ್ಯ ಎಂದರು.
ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿ ಶ್ರೀನಾಥ್ ಎನ್. ಕೆ., ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಸ್ವಾಗತಿಸಿದರು. ಸಾಂಸ್ಕೃತಿಕ ಸಂಯೋಜಕ ಮಹಾಬಲ ಗೌಡ ಧನ್ಯವಾದವಿತ್ತರು. ಪ್ರಜ್ವಲ ಡಿ. ಆರ್. ಕಾರ್ಯಕ್ರಮ ನಿರೂಪಿಸಿದರು.