ಬೆಳಾಲು: ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ, ಸುಂದರ – ಸುಲಲಿತವಾದ ಕನ್ನಡ ಭಾಷೆಯನ್ನು ಮಾತನಾಡುತ್ತಾ ನಾವು ಕನ್ನಡಿಗರು ಎಂಬ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಭವಾನಿ ಮಾರ್ಪಾಲು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ವೈಷ್ಣವಿ ಮತ್ತು ಸುಜನ್ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿನಿ ತ್ರಿಷಾ ಜೈನ್ ಆಯ್ದ ಮಂಕುತಿಮ್ಮನ ಕಗ್ಗ ಮತ್ತು ತ್ರಿಪದಿಗಳನ್ನು ವಾಚಿಸಿದರು. ವಿದ್ಯಾರ್ಥಿಗಳಿಂದ ನಾಡಗೀತೆಗಳ ಗಾಯನ ನೆರವೇರಿತು. ಕಾರ್ಯಕ್ರಮವನ್ನು ಕನ್ನಡ ಶಿಕ್ಷಕ ಸುಮನ್ ಯು ಎಸ್ ಸಂಯೋಜಿಸಿದರು. ವಿದ್ಯಾರ್ಥಿಗಳಾದ ಮೋಕ್ಷಿತಾ ಸ್ವಾಗತಿಸಿ , ನಿಶ್ಮಿತಾ ವಂದಿಸಿದರು. ಇಂದುಮತಿ ನಿರೂಪಿಸಿದರು.