ಬೆಳಾಲು: ಶ್ರೀ ಮಾಯ ಮಹೇಶ್ವರ ಭಜನಾ ಮಂಡಳಿಯ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುತ್ತಿರುವ 42 ನೇ ವರ್ಷದ ಆಟೋಟ ಸ್ಪರ್ಧೆಯ ಉದ್ಘಾಟನೆ ನ. 3ರಂದು ಶ್ರೀ ಮಾಯ ಮಹಾದೇವ ದೇವಸ್ಥಾನದ ವಠಾರದಲ್ಲಿ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಕೇಶವ ರಾಮಯಾಜಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಬೆಳಾಲು ಶ್ರೀ ಧ. ಮ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯರಾಮ ಮಯ್ಯ, ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ, ಮಾಯ ಸರಕಾರಿ ಉನ್ನತಿಕರಿಸಿದ ಶಾಲಾ ಮುಖ್ಯ ಶಿಕ್ಷಕ ವಿಠ್ಠಲ ಎಂ, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ದಯಾನಂದ ಪಿ., ಬೆಳಾಲು ದುರ್ಗಾ ವುಡ್ ವರ್ಕ್ಸ್ ಮಾಲಕ ದಿವಾಕರ ಆಚಾರ್ಯ, ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೇಮಲತಾ ಗಣಪನಗುತ್ತು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ಆಚಾರ್ಯ ಕುದ್ರಾಲು ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನದ ವ್ಯವಸ್ಥಾಪಕ ಶೇಖರ ಗೌಡ ಕೊಲ್ಲಿಮಾರು ಸ್ವಾಗತಿಸಿದರು. ಶಿಕ್ಷಕ ಮಹೇಶ್ ಪುಳಿತ್ತಡಿ ಕಾರ್ಯಕ್ರಮ ನಿರೂಪಿಸಿದರು.ಭಜನಾ ಮಂಡಳಿಯ ಕೋಶಾಧಿಕಾರಿ ಗಣೇಶ್ ಕನಿಕ್ಕಿಲ ವಂದಿಸಿದರು. ಭಜನಾ ಮಂಡಳಿಯ ಪದಾಧಿಕಾರಿಗಳು, ಸ್ಪರ್ಧಿಗಳು, ತೀರ್ಪುಗಾರರು, ಊರವರು ಉಪಸ್ಥಿತರಿದ್ದರು.
ಬಳಿಕ ವಿವಿಧ ವಯಾಮಾನದ ವಿವಿಧ ಆಟೋಟ ಸ್ಪರ್ಧೆಗಳು ಜರಗಿತು.