ಉಜಿರೆ: ”ಭಾರತ ವಿಶ್ವಗುರುವಾಗುವ ಹಾದಿಯಲ್ಲಿ ಕರ್ನಾಟಕದ ಮಕ್ಕಳಾದ ನಾವು ನಮ್ಮ ಕೊಡುಗೆ ನೀಡಬೇಕು. ಈ ದಿನಕ್ಕಾಗಿ ಹೋರಾಡಿದ ಮಹಾನ್ ನಾಯಕರನ್ನು ಇಂದು ನೆನೆಯಲೇ ಬೇಕು”
ಎಂದು ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಶಿಕ್ಷಕಿ ಭವ್ಯ ಹೇಳಿದರು.
ಇವರು ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಕರ್ನಾಟಕ ಹಾಗೂ ಕನ್ನಡದ ಮಹತ್ವದ ಕುರಿತು ತಿಳಿಸಿದರು. ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಲಾ ವಿದ್ಯಾರ್ಥಿಗಳಿಂದ ಗುಂಪುಗಾಯನ ಹಾಡಲಾಯಿತು.
ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿ ಸಮ್ಮೇದ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ. ಸ್ವಾಗತಿಸಿ, ವಿದ್ಯಾರ್ಥಿನಿ ಗಾನಪ್ರಿಯ ವಂದಿಸಿದರು.