ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ ಇಲ್ಲಿ 69ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ರಾಷ್ಟ್ರ ಧ್ವಜದ ಬಳಿಕ ನಾಡ ಧ್ವಜಾರೋಹಣವನ್ನು ನೆರವೇರಿಸಲಾಯಿತು. ಧ್ವಜಾರೋಹಣದ ಬಳಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ ಜಾರ್ಜ್ ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕನ್ನಡಾಂಬೆಗೆ ಗೌರವ ನಮನ ಸಲ್ಲಿಸಿದರು.
ಆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಸಹ ಶಿಕ್ಷಕಿ ಸೌಮ್ಯ ಲಾರೆನ್ಸ್ ಕನ್ನಡ ರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ಬಳಿಕ ವಿದ್ಯಾರ್ಥಿಗಳು ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿ ಈ ದಿನದ ಮೆರುಗನ್ನು ಹೆಚ್ಚಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಫ್ಲೋರಿನ್ ಲವೀನಾ ನೆರವೇರಿಸಿದರು. ಅಖಿಲಾ ಇವರು ವಂದನಾರ್ಪಣೆ ಸಲ್ಲಿಸಿ, ಸಿಹಿತಿಂಡಿಯೊಂದಿಗೆ ಕಾರ್ಯಕ್ರಮವು ಪರಿಸಮಾಪ್ತಿಯಾಯಿತು.