ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಕನ್ನಡ ಸಂಘದ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನಿರ್ವಹಿಸಿದರು. ಹಚ್ಚೇವು ಕನ್ನಡದ ದೀಪ ಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಶಾಲಾ ಸಂಚಾಲಕ ಅತೀ ವಂ. ಫಾ. ವಾಲ್ಟರ್ ಡಿಮೆಲ್ಲೋ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಕನ್ನಡ ಭಾಷೆ ಮತ್ತು ಸಾಹಿತ್ಯದ ಕಡೆಗೆ ಇಂದಿನ ವಿದ್ಯಾರ್ಥಿಗಳು ಒಲವನ್ನು ಮೂಡಿಸಿಕೊಳ್ಳಬೇಕೆಂದು ನುಡಿದು ಶುಭ ಹಾರೈಸಿದರು. ನಾಡಗೀತೆಯ ಮೂಲಕ ಕನ್ನಡಾಂಬೆಗೆ ನಮನವನ್ನು ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ರಮೇಶ್ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯ ವಂ. ಫಾ. ಕ್ಲಿಫರ್ಡ್ ಪಿಂಟೋ ಶುಭಹಾರೈಸಿದರು. ಅರ್ವಿನ್ ಬೆನ್ನಿಸ್ ಕನ್ನಡ ರಾಜ್ಯೋತ್ಸವದ ಆಚರಣೆಯ ಮಹತ್ವ ಮತ್ತು ಹಿನ್ನೆಲೆಯನ್ನು ತಿಳಿಸಿದರು. ವಿದ್ಯಾರ್ಥಿನಿ ದೀಕ್ಷಾ ಕಾರ್ಯಕ್ರಮ ನಿರೂಪಿಸಿ, ಪ್ರಜ್ಞಾ ಪಿ. ವಿ. ಸ್ವಾಗತಿಸಿ, ಮಾನ್ವಿ ವಂದಿಸಿದರು. ತಾಲೂಕು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿಯರು ನೃತ್ಯ ಪ್ರದರ್ಶನಗೈದರು. ಸಹ ಶಿಕ್ಷಕಿಯರಾದ ಪಲ್ಲವಿ ಮತ್ತು ಸುಮಿತ್ರ ಸಹಕರಿಸಿದರು.