ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ನಾಡಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಅಲೆಕ್ಸ್ ಐವನ್ ಸಿಕ್ವೇರಾ ಮಾತನಾಡಿ ಕರ್ನಾಟಕ ರಾಜ್ಯದ ಉದಯ ಮತ್ತು ಅದರ ಹಿನ್ನೆಲೆಯನ್ನು ವಿವರಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಈಶ್ವರ ಗೌಡ ಮಾತನಾಡಿ ಕರ್ನಾಟಕದ ಕಲೆ, ಸಂಸ್ಕೃತಿ, ಉಳಿಸುವ ನಿಟ್ಟಿನಲ್ಲಿ ಇಂದಿನ ವಿದ್ಯಾರ್ಥಿಗಳ ಪಾತ್ರ ಮತ್ತು ಪಾಲ್ಗೊಳ್ಳುವಿಕೆಯ ಅರಿವನ್ನು ಮೂಡಿಸಿದರು.
ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಆಶಯ ಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಪ್ರಶಾಂತ್ ಎಂ., ಜೀವಾ ವಿ.ಸಿ., ಐ.ಕ್ಯೂ.ಎಸ್.ಸಿ ನಿರ್ದೇಶಕ ರಾಬಿನ್ ಜೋಸೆಫ್ ಸೇರಾ, ಕಾಲೇಜಿನ ಬೋಧಕ ಮತ್ತು ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಮುಖ್ಯಸ್ಥೆ ರಾಜೇಶ್ವರಿ ಇವರು ನಡೆಸಿಕೊಟ್ಟರು.
p>