ಪದ್ಮುಂಜ: ಕೃಷಿಕರ ಬದುಕಿಗೆ ಆಧಾರ ಆಗಿರುವ ಅಡಿಕೆ ಕೃಷಿಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನ. 07ರಂದು ಬೆಳಗ್ಗೆ 10.30 ಕ್ಕೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಭೇತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಹಾಗೂ ತೋಟಗಾರಿಕಾ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಂಡಿದ್ದು, ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತರಬೇತಿ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಆಗಮಿಸಿ ಪ್ರಯೋಜನ ಪಡೆದುಕೊಳ್ಳಬೇಕಾಗಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Home ಇತ್ತೀಚಿನ ಸುದ್ದಿಗಳು ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆಧುನಿಕ ಬೇಸಾಯ ಕ್ರಮದ ಕುರಿತು ತರಬೇತಿ...