ನಾರಾವಿ: ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯೋತ್ಸವ ಆಚರಣೆ

0

ನಾರಾವಿ: “ಕರ್ನಾಟಕವು ವಿವಿಧ ಭಾಷೆ, ಕಲೆ, ಸಂಸ್ಕೃತಿಗಳ ತವರೂರು ಹಾಗೂ ಇಲ್ಲಿ ಕನ್ನಡ ಭಾಷೆಗಿರುವ ಸ್ಥಾನ ಮಹತ್ವದ್ದು. ಕನ್ನಡ ಭಾಷೆಯನ್ನು ಉಳಿಸುವುದು, ಕರ್ನಾಟಕದಲ್ಲಿನ ಸಂಸ್ಕೃತಿಯನ್ನು ಬೆಳೆಸುವುದು ಮನುಷ್ಯನ ಮೊದಲ ಧ್ಯೇಯವಾಗಿರಬೇಕು” ಎಂದು ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ. ಸ್ವಾಮಿ ಜೆರೋಮ್ ಡಿ’ಸೋಜಾ ಹೇಳಿದರು. ಅವರು ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿ ಮಾತಾಡಿದರು. ದೇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು ನಂತರ ಧ್ವಜಾರೋಹಣವನ್ನು ಮಾಡಿ ರಾಷ್ಟ್ರ ಗೀತೆ ಹಾಗೂ ಕರ್ನಾಟಕದ ವೈಭವವನ್ನು ಸಾರುವ ನಾಡಗೀತೆಯನ್ನು ಹಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಪದವಿ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ದಿನೇಶ್ ಬಿ.ಕೆ. ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು. ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರು, ಎಲ್ಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಪದವಿ ಕಾಲೇಜಿನ ವಿದ್ಯಾರ್ಥಿನಿ ಅನ್ವಿತಾ ರಾವ್ ಮಾಡಿದರು. ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚುವುದರ ಮೂಲಕ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮಿಸಲಾಯಿತು.

LEAVE A REPLY

Please enter your comment!
Please enter your name here