




ಪಟ್ರಮೆ: ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಧ್ವಜಾರೋಹಣಗೈದು, ರಾಜ್ಯೋತ್ಸವದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.



ಪುಟಾಣಿಗಳಿಗೆ ಪ್ರೋತ್ಸಾಹಕವಾಗಿ ಬಹುಮಾನ ನೀಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಪೋಷಕರು ಹಾಗೂ ಶಿಕ್ಷಕ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.









