




ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವು ಧ್ವಜಾರೋಹಣದಿಂದ ಪ್ರಾರಂಭವಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅಭ್ಯಾಗತರಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಇಲ್ಲಿನ ಕನ್ನಡ ಪ್ರಾಧ್ಯಾಪಕ ಮಹಾವೀರ ಜೈನ್ ಇಚ್ಲಂಪಾಡಿ ಇವರು ಆಗಮಿಸಿದ್ದರು. ಇವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಹಾಗೂ ಭಾಷೆಯ ಹಿರಿಮೆ ಗರಿಮೆಯನ್ನು ವಿವರಿಸಿದರು.



ಈ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿನಿ ಮಹಿಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ. ವಿ. ಸ್ವಾಗತಿಸಿ, ಆರಾಧ್ಯ ಜೋಷಿ ಅತಿಥಿಗಳ ಪರಿಚಯವನ್ನು ನೀಡಿ, ಆರುಷ್ ಜೋಷಿ ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.









