




ನಾವೂರ: ಕಸ್ತೂರಿ ರಂಗನ್ ವರದಿಯ ವಿರುದ್ಧ ನಾವೂರ ಗ್ರಾಮ ಪಂಚಾಯತ್ ಮುಂಭಾಗ ನ.6ರಂದು ಪ್ರತಿಭಟನೆ ನಡೆಯಿತು.


ಈ ಸಂದರ್ಭದಲ್ಲಿ ಮಲೆನಾಡು ಹಿತ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಸದಾನಂದ ಉಂಗಿಲಬೈಲು, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್, ನಾವೂರು ಗ್ರಾ.ಪಂ. ಅಧ್ಯಕ್ಷೆ ಸುನಂದಾ, ಉಪಾಧ್ಯಕ್ಷೆ ಮಮತಾ, ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಮಲೆನಾಡು ಹಿತ ರಕ್ಷಣಾ ಜಿಲ್ಲಾ ಸಮಿತಿಯ ಸದಸ್ಯ ಕರುಣಾಕರ ಶಿಶಿಲ, ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ಸದಸ್ಯ ಸಂದೇಶ್ ಮಲವಂತಿಗೆ, ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ನಾವೂರು ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಗಣೇಶ್ ಗೌಡ ಸ್ವಾಗತಿಸಿದರು, ಡಾ. ಟಿಪಿ ಆಂಟನಿ ದಿಕ್ಸೂಚಿ ಭಾಷಣ ಮಾಡಿದರು. ಧರ್ಣಪ್ಪ ಮೂಲ್ಯ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.









