ಮೊಗ್ರು: ಮಹಿಳೆ ಆತ್ಮಹತ್ಯೆ

0

ಉಪ್ಪಿನಂಗಡಿ: ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.4ರಂದು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದಲ್ಲಿ ನಡೆದಿದೆ.

ಮೊಗ್ರು ನಿವಾಸಿ ಗಿರಿಜಾ ಆತ್ಮಹತ್ಯೆ ಮಾಡಿಕೊಂಡವರು. ಇವರು ಮಾನಸಿಕ ಹಾಗೂ ಇತರೇ ಕಾಯಿಲೆಗಳಿಂದ ಬಳಲುತ್ತಿದ್ದು ಚಿಕಿತ್ಸೆ ಮಾಡಿದರೂ ಗುಣಮುಖರಾಗದೇ ಇದ್ದ ಹಿನ್ನೆಲೆಯಲ್ಲಿ ಜಿಗುಪ್ಸೆಗೊಂಡಿದ್ದರು. ಇದೇ ವಿಚಾರದಲ್ಲಿ ನ.4ರಂದು ಬೆಳಗ್ಗಿನಿಂದ ಸಂಜೆಯ ಅವಧಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಿಂಬದಿ ಇರುವ ಮಾವಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮೃತರ ಪುತ್ರ ಯೋಗೀಶ ಗೌಡ ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

p>

LEAVE A REPLY

Please enter your comment!
Please enter your name here