Site icon Suddi Belthangady

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಗಾರ

ಬೆಳ್ತಂಗಡಿ: ವಿದ್ಯಾರ್ಥಿ ದೆಸೆಯಲ್ಲಿಯೇ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ವೃತ್ತಿಯ ಬಗ್ಗೆ ಯೋಚಿಸಿ ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಹೇಳಿದರು.

ಅವರು ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್, ಮಂಗಳೂರು ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘದ ಸಹಭಾಗಿತ್ವದಲ್ಲಿ ವಾಣಿಜ್ಯ ವಿಭಾಗದ ಆಯ್ದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಬುದ್ಧಿವಂತಿಕೆಯಿಂದ ಕಾರ್ಯಪ್ರವೃತ್ತರಾಗಿ ಉತ್ತಮ ನಾಯಕತ್ವವನ್ನು ಬೆಳೆಸಿಕೊಂಡು ಯಶಸ್ಸಿನ ಜೀವನಕ್ಕೆ ಮುನ್ನಡಿ ಇಡಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಉಪಸ್ಥಿತರಿದ್ದರು. ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್ ಮಂಗಳೂರು ಇದರ ಅಧ್ಯಕ್ಷ ಡಾ. ರಾಘವೇಂದ್ರ ಎನ್. ಹೊಳ್ಳ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶಾಲಿಕಾ ಪಿ. ಆರ್. ಸ್ವಾಗತಿಸಿದರು. ಪವಿತ್ರ ಧನ್ಯವಾದವಿತ್ತರು. ಉಪನ್ಯಾಸಕಿ ಲತಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Exit mobile version