ಶಿಶಿಲ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ವಠಾರದಲ್ಲಿ ನ.7ರಂದು ಪ್ರತಿಭಟನೆ ನಡೆಯಿತು. ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸರಕಾರ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂದು ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಶಿರಾಡಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಶಿರಾಡಿ, ಶಿಶಿಲ ಗ್ರಾ. ಪಂಚಾಯತ್ ಅಧ್ಯಕ್ಷ ಸುಧೀನ್, ಶಿಶಿಲ ಪಂಚಾಯತ್ ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ಬಾಲಕೃಷ್ಣ ರೆಖ್ಯ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕುಶಾಲಪ್ಪ ಗೌಡ ಬದ್ರಿಜಾಲು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶೀನಪ್ಪ ನಾಯ್ಕ ವಂದಿಸಿದರು.