ಕಳೆಂಜ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

0

ಕಳೆಂಜ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಕಳೆಂಜ ಗ್ರಾ.ಪಂ ವಠಾರದಲ್ಲಿ ನ.7ರಂದು ಪ್ರತಿಭಟನೆ ನಡೆಯಿತು.

ಸರಕಾರ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂದು ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಶಿರಾಡಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋ‌ರ್ ಕುಮಾರ್ ಶಿರಾಡಿ, ಕಳೆಂಜ ಗ್ರಾ. ಪಂಚಾಯತ್ ಉಪಾಧ್ಯಕ್ಷ ವಿಶ್ವನಾಥ ಗೌಡ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯ ನವೀನ್ ರೆಖ್ಯ, ಕಳೆoಜ ಅರಣ್ಯ ಸಮಿತಿಯ ಅಧ್ಯಕ್ಷ ಧನಂಜಯ ಗೌಡ, ಮಲೆನಾಡು ಹಿತರಕ್ಷಣಾ ಜಿಲ್ಲಾ ಸಮಿತಿ ಸದಸ್ಯ ಸೋಯಿ ಪುದುವೆಟ್ಟು, ವಸಂತ ಕಳೆಂಜ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಪ್ರಸನ್ನ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಗ್ರಾ.ಪಂ. ಸದಸ್ಯ ಹರೀಶ್ ಕೊಯಿಲ ವಂದಿಸಿದರು. ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ ಕೆ. ಹಾಗೂ ಕಾರ್ಯದರ್ಶಿ ಹೊನ್ನಪ್ಪ ಗೌಡ ಎಮ್. ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

p>

LEAVE A REPLY

Please enter your comment!
Please enter your name here