ಕಳೆoಜ: ನಡುಜಾರು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

0

ಕಳೆಂಜ: ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯ ವಿದ್ಯಾರ್ಥಿ ಸಂಘ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್‌ ಕಾರ್ಯಕ್ರಮ 2.5 NVG eyeMiTRA ಸುರತ್ಕಲ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.8ರಂದು ನಡೆಯಿತು. ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಹರೀಶ್ ಕೊಯ್ಲಾ ಉದ್ಘಾಟಿಸಿದರು.

ಶಿಬಿರದ ವಿಶೇಷತೆ: ಕಂಪ್ಯೂಟರೀಕೃತ ಕಣ್ಣಿನ ಉಚಿತ ತಪಾಸಣೆ, 5ರಿಂದ 15 ವಯಸ್ಸಿನವರೆಗೆ ಕಣ್ಣಿನ ತೊಂದರೆ ಇರುವ ಮಕ್ಕಳಿಗೆ ಶಿಬಿರದ ಪ್ರಯುಕ್ತ ಉಚಿತವಾಗಿ ಕನ್ನಡಕವನ್ನು ವಿತರಿಸಲಾಯಿತು. ಶಿಬಿರದಲ್ಲಿ (Near Vision) ಹತ್ತಿರದ ದೃಷ್ಟಿ ತೊಂದರೆಯವರಿಗೆ ಉಚಿತ ಕನ್ನಡಕವನ್ನು ವಿತರಿಸಲಾಯಿತು. 15 ವಯಸ್ಸಿಗಿಂತ ಮೇಲ್ಪಟ್ಟು ದೂರದೃಷ್ಟಿ ಮತ್ತು ಸಮೀಪ ದೃಷ್ಟಿ ತೊಂದರೆ ಇರುವ ಅಗತ್ಯವುಳ್ಳವರಿಗೆ
ಕನ್ನಡಕವನ್ನು ರಿಯಾಯಿತಿ ದರದಲ್ಲಿ ವಿತರಿಸಲಾಯಿತು. ಶಿಬಿರದಲ್ಲಿ ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು. ಶಿಬಿರದಲ್ಲಿ ನೇತ್ರದಾನದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಜೋಮೆಟ್ ಮಾಣಿಗೇರಿ, ಎಸ್.ಡಿ.ಎಂ.ಸಿ. ಸದಸ್ಯರು, ಶಾಲಾ ಶಿಕ್ಷಕರು, ಊರಿನ ನಾಗರಿಕರು, ಶಾಲಾ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here