ಸುಲ್ಕೇರಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.8 ರಂದು ಸುಲ್ಕೇರಿ ಗ್ರಾಮ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಸಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಿರಿಜಾ, ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಸದಾನಂದ ಗೌಡ, ಸುಲ್ಕೇರಿ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ ನಾರಾಯಣ ಪೂಜಾರಿ ಉಪಸ್ಥಿತರಿದ್ದರು. ವಿಶ್ವನಾಥ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
p>