Site icon Suddi Belthangady

ಸುಲ್ಕೇರಿ: ಗ್ರಾಮ ಪಂಚಾಯತ್ ಮುಂಭಾಗ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

ಸುಲ್ಕೇರಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.8 ರಂದು ಸುಲ್ಕೇರಿ ಗ್ರಾಮ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಸಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಿರಿಜಾ, ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಸದಾನಂದ ಗೌಡ, ಸುಲ್ಕೇರಿ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ ನಾರಾಯಣ ಪೂಜಾರಿ ಉಪಸ್ಥಿತರಿದ್ದರು. ವಿಶ್ವನಾಥ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Exit mobile version