ಬೆಳ್ತಂಗಡಿ: ಡಿಸೆಂಬರ್ 20, 21 ಮತ್ತು 22ರಂದು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕುರಿತಾಗಿ ಅರಿವು ಮೂಡಿಸುವ ಹಾಗೂ ಸಮ್ಮೇಳನದಲ್ಲಿ ಕನ್ನಡ ಪ್ರೇಮಿಗಳು ಭಾಗಿಯಾಗುವಂತೆ ಮಾಡುವ ನಿಟ್ಟಿನಲ್ಲಿ ಕನ್ನಡ ಜ್ಯೋತಿ ಹೊತ್ತ ಕನ್ನಡ ಭುವನೇಶ್ವರಿಯ ರಥ ನ.8ರಂದು ಬೆಳ್ತಂಗಡಿಗೆ ಆಗಮಿಸಿತು.
ಸಂಜೆ ಸಂತೆಕಟ್ಟೆ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ರಥವನ್ನು ಸ್ವಾಗತಿಸಿ, ಅಲ್ಲಿಂದ ಮೆರವಣಿಗೆ ಮೂಲಕ ಸಂಚರಿಸಿ, ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ತಲುಪಿ ಸಭೆ ನಡೆಯಿತು.
ತಹಸಿಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಯದುಪತಿ ಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶ್ರೀನಾಥ್, ನಗರ ಪಂಚಾಯತ್ ಮುಖ್ಯ ಅಧಿಕಾರಿ ರಾಜೇಶ್, ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್ ಡಿ, ತಾಲೂಕು ಪಂಚಾಯತ್ ನ ಪ್ರಶಾಂತ್ ಡಿ., ತಾಲೂಕು ಸಾಹಿತ್ಯ ಪರಿಷತ್ ನ ಕಾರ್ಯದರ್ಶಿ ಪ್ರಮೀಳಾ, ಪ್ರಮುಖರಾದ ಕೃಷ್ಣಪ್ಪ ಪೂಜಾರಿ, ಸಹಿತ ತಾಲೂಕು ಮಟ್ಟದ ಅಧಿಕಾರಿಗಳು, ನಾಗರಿಕರು ಉಪಸ್ಥಿತರಿದ್ದರು.
p>