Site icon Suddi Belthangady

ಬೆಳ್ತಂಗಡಿ: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನೆ ಸಭೆ

ಬೆಳ್ತಂಗಡಿ: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಮಾಲೋಚನಾ ಸಭೆ ನ.8ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದು, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಹೋರಾಟ ಸಮಿತಿ ಉಪಾಧ್ಯಕ್ಷ ಶಿವಕುಮಾರ್ ಎಸ್.ಎಂ., ಹಿರಿಯ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಲೋಬೊ, ವಕೀಲರು, ಮಾಜಿ ವಿಧಾನ ಪರಿಷತ್‌ ಸದಸ್ಯ ಮೋನಪ್ಪ ಭಂಡಾರಿ ಉಪಸ್ಥಿತರಿದ್ದರು. ಸರಕಾರಿ ಅಭಿಯೋಜಕ ಮನೋಹರ್ ಕುಮಾರ್ ನಿರೂಪಿಸಿದರು. ಶೈಲೇಶ್ ಆ‌ರ್ ಟೋಸಲ್ ಸ್ವಾಗತಿಸಿ, ವಕೀಲರ ಸಂಘದ ಕಾರ್ಯದರ್ಶಿ ನವೀನ್ ಬಿ.ಕೆ. ಧನ್ಯವಾದವಿತ್ತರು.

Exit mobile version