p>
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್, ಬೆಳ್ತಂಗಡಿ ತಾಲೂಕು ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನ.8ರಂದು ನಡೆಸಲಾಯಿತು.
ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರೌಢಶಾಲಾ ವಿಭಾಗದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಸಾತ್ವಿಕ್ ಭಟ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಗಾನಪ್ರಿಯ ತೃತೀಯ ಸ್ಥಾನ, ಚಿತ್ರಕಲಾ ಸ್ಪರ್ಧೆಯಲ್ಲಿ ಲಾಜ್ಮೀಯ ತೃತೀಯ ಸ್ಥಾನ ಪಡೆದಿದ್ದಾರೆ.
p>