ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ವಾಣಿ ಪದವಿ ಪೂರ್ವ ಕಾಲೇಜು ಮತ್ತು ಕಾನೂನು ಸಾಕ್ಷರತಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನ.9ರಂದು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಉದ್ಘಾಟನೆಯನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್. ಉದ್ಘಾಟನೆಯನ್ನು ಮಾಡಿದರು. ಅಧ್ಯಕ್ಷತೆಯನ್ನು ವಾಣಿ ಕಾಲೇಜಿನ ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಪ್ರಶಾಂತ್ ಎಂ.ಇವರು ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕುರಿತು ಕಾನೂನು ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ವಾಣಿ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಶ್ರೀನಾಥ ಕೆ.ಎಂ., ವಾಣಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಮೀನಾಕ್ಷಿ, ಕೋರ್ಟ್ ನ ಸಿಬ್ಬಂದಿ ಯಲ್ಲಪ್ಪ ಹಂಗರಗಿ ಉಪಸ್ಥಿತರಿದ್ದರು.
p>