ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.11ರಂದು ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಸಂಘಟನೆಯ ಜಿಲ್ಲಾ ಸಂಚಾಲಕ ಕಿಶೋರ್ ಶಿರಾಡಿ, ಶಾಸಕ ಹರೀಶ್ ಪೂಂಜ, ಪ.ಪಂ.ಅಧ್ಯಕ್ಷ ಜಯಾನಂದ ಗೌಡ, ನಿವೃತ್ತ ಪ್ರಾಂಶುಪಾಲ ಅಂಟೋನಿ, ರೈತ ಸಂಘ ಜಿಲ್ಲಾಧ್ಯಕ್ಷ ಪ್ರಶಾಂತ್, ಪ್ರಮುಖರಾದ ಸಂದಾನಂದ ಉಂಗಿಲಬೈಲು, ಶಿರ್ಲಾಲು ಚರ್ಚ್ ನ ಫಾ. ಮ್ಯಾಥ್ಯು, ಬಿಜೆಪಿ ರೈತಾಮೋರ್ಚಾದ ಜಿಲ್ಲಾಧ್ಯಕ್ಷ ಗಣೇಶ್ ನಾವೂರು ಸಹಿತ ವಿವಿಧ ಗ್ರಾಮದ ಪದಾಧಿಕಾರಿಗಳು, ರೈತರು, ಗ್ರಾಮಸ್ಥರು ಭಾಗವಹಿಸಿದ್ದರು.
ಕಸ್ತೂರಿ ರಂಗನ್ ವರದಿಯನ್ನು ಕೈಬಿಡುವಂತೆ ಕೋರಿ ಸಿಎಂಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿಲಾಯಿತು. ಪ್ರತಿಭಟನೆಯ ಮೊದಲು ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ತಾಲೂಕು ಕಚೇರಿಯವರೆಗೆ ಮೆರೆವಣಿಗೆ ನಡೆಯಿತು. ಪ್ರತಿಭಟನಾಕಾರರು ಕಸ್ತೂರಿ ರಂಗನ್ ವರದಿಗೆ ದಿಕ್ಕಾರ ಕೂಗಿದರು.
p>