




ಕಾಶಿಪಟ್ಣ: ಪಂಚಾಯತ್ ರಾಜ್ ವ್ಯವಸ್ಥೆಯ ಸಬಲೀಕರಣದತ್ತ ದಾಪುಗಾಲಿಡುತ್ತಿರುವ ವಿವಿಧ ಗ್ರಾಮ ಪಂಚಾಯತ್ಗಳಿಗೆ ಕಾರಂತ ಪುರಸ್ಕಾರ ನೀಡುತ್ತಿದ್ದು, ಉಡುಪಿ ಮತ್ತು ದ.ಕ ಜಿಲ್ಲೆಯ ಒಟ್ಟು 22 ಗ್ರಾ.ಪಂ.ಗಳು ಆಯ್ಕೆಯಾಗಿದ್ದು, ಕೋಟತಟ್ಟು ಗ್ರಾಮ ಪಂಚಾಯತ್ ಕೊಡಮಾಡುವ ಈ ಪುರಸ್ಕಾರವನ್ನು ನ.10ರಂದು ಕೋಟದ ಶಿವರಾಮ ಕಾರಂತ ಥೀಂ ಪಾರ್ಕ್ನಲ್ಲಿ ನಡೆದ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೇಘಾಲಯದ ರಾಜ್ಯಪಾಲ ವಿಜಯಶಂಕರ್ ಇವರು ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷೆ ಶಾಂಭವಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಗ್ರಾಮ ಪಂಚಾಯತ್ ಸದಸ್ಯರು, ಸಿಬಂದಿ ವರ್ಗ ಇವರು ಪ್ರಶಸ್ತಿ ಸ್ವೀಕರಿಸಿದರು.


ಘನತ್ಯಾಜ್ಯ ವಿಲೇವಾರಿ, ಸಮಗ್ರ ಆಡಳಿತ, ನರೇಗಾ ಯೋಜನೆ, ತೆರಿಗೆ ಸಂಗ್ರಹ ಮತ್ತು ಸ್ಮಶಾನ ಅಭಿವೃದ್ಧಿ ಸಹಿತ ವಿವಿಧ ಮಾನದಂಡಗಳ ಆಧಾರದಲ್ಲಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿತ್ತು. ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಗ್ರಾ.ಪಂ.ಗಳನ್ನೂ ಪುರಸ್ಕರಿಸಲಾಗಿದೆ.









