ಬೆಳ್ತಂಗಡಿ: ಸುರ್ಯಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ವಿಜಯ ಜಿ. ಜೈನ್ ಅವರು ನ.11ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಅವರು ಮಕ್ಕಳಾದ ಹೊಸದಿಗಂತ ಪತ್ರಿಕೆಯ ಪುತ್ತೂರು ವರದಿಗಾರ ಐ.ಬಿ. ಸಂದೀಪ್ ಕುಮಾರ್, ಇರ್ವತ್ತೂರು ಮಾಗಣೆ ಗುರಿಕಾರ ಐ.ಬಿ. ಸಂಜೀತ್ ಕುಮಾರ್ ಮತ್ತು ಮಿಜಾರು ಅನಂತಮ್ ಮನೆಯ ಶಾಲಿನಿ ನವೀನ್ ಕುಮಾರ್ ಅವರನ್ನು ಅಗಲಿದ್ದಾರೆ.\
ಜೈನ ಭಕ್ತಿ ಸುಮನಾಂಜಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಡೆ ಅವರ ಯಶೋಗಾಥೆ ಗೋಮಟೇಶ ಚರಿತೆ ಸಾಂಗತ್ಯ, ತುಳು ಭಾಷಾಂತರಿತ ಬೃಹತ್ ಸ್ವಯಂಭು ಸ್ತೋತ್ರ, ಜೈನ ಧರ್ಮದ ಧರ್ಮ ಗ್ರಂಥ ಮೋಕ್ಷ ಶಾಸ್ತ್ರ ವಿಜಯ ಜಿ. ಜೈನ್ ಅವರ ಪ್ರಕಟಿತ ಸಾಹಿತ್ಯಗಳು. ಜಿನ ಸಹಸ್ರ ನಾಮ, ಪದ್ಮ ಪುರಾಣ ಅವರ ಅಪ್ರಕಟಿತ ಸಾಹಿತ್ಯಗಳು. ಇದರ ಜೊತೆಗೆ ವಿವಿಧ ಸಂಘ ಸಂಸ್ಥೆಗಳಲ್ಲೂ ಸಕ್ರಿಯರಾಗಿದ್ದ ಅವರು ಕೆಲ ಕಾಲ ಶಿಕ್ಷಕಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.