ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ, ಜಿಲ್ಲಾ ಮಹಿಳಾ ಮೋರ್ಚಾದ ತಂಡವು ನ.11ರಂದು ಬಿಜೆಪಿ ಕಚೇರಿ ಭೇಟಿ ನೀಡಿದರು. ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ರಾವ್, ಪ್ರಧಾನ ಕಾರ್ಯದರ್ಶಿ ಲಖಿತಾ ಶೆಟ್ಟಿ , ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಪ್ರಭಾರಿ ಬಬಿತ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಯಶಸ್ವಿನಿ, ಅಮಿತಾ ಉಪಸ್ಥಿತರಿದ್ದರು.
ಸಭೆಯಲ್ಲಿ ಮಾತನಾಡಿದ ಮಂಜುಳಾ ರಾವ್ ಬೆಳ್ತಂಗಡಿ ಮಹಿಳಾ ಮೋರ್ಚಾದ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಎಲ್ಲಾ ಪದಾಧಿಕಾರಿಗಳು ಸಕ್ರಿಯ ಸದಸ್ಯರಾಗಲೇಬೇಕು. ಈ ನಿಟ್ಟಿನಲ್ಲಿ ಜಾಗೃತರಾಗಿ ಮಹಿಳಾ ಸದಸ್ಯರು ಇನ್ನುಳಿದ ಎರಡು ದಿನಗಳನ್ನು ಸರಿಯಾಗಿ ಉಪಯೋಗಿಸಿಕೊಂಡು ಕೆಲಸ ಮಾಡಿ ಎಂದರು. ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಮಾತನಾಡಿ ಎಲ್ಲಾ ಸದಸ್ಯರು ಸದಸ್ಯತ್ವ ಕಾರ್ಯದಲ್ಲಿ ತೊಡಗಿಸಿಕೊಂಡು ಯಾವುದೇ ಜವಾಬ್ದಾರಿಯನ್ನು ಒಗ್ಗಟ್ಟಿನಿಂದ ನಿರ್ವಹಿಸುವ ಎಂದು ಹೇಳಿದರು. ಬೆಳ್ತಂಗಡಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದರು. ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತುಳಸಿ ಸ್ವಾಗತಿಸಿ, ಪೂರ್ಣಿಮಾ ಜಯಂತ್ ವಂದಿಸಿದರು.