Site icon Suddi Belthangady

ಬೆಳ್ತಂಗಡಿ: ದಯಾ ವಿಶೇಷ ಶಾಲೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಅಂಧ, ವಾಕ್ ಮತ್ತು ಶ್ರವಣ ದೋಷ ಹೊಂದಿರುವ ಹಾಗೂ ಹಲವು ನ್ಯೂನತೆಗಳಿಂದ ಕೂಡಿದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ 150 ಮಕ್ಕಳಿಗೆ ವಿದ್ಯಾಭ್ಯಾಸ ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತ ಬರುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ ಕೊಯ್ಯೂರು ಇವರ ಸೇವೆಯನ್ನು ಗುರುತಿಸಿ ಸರ್ಕಾರ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು, ಪ್ರಶಸ್ತಿಗೆ ಆಯ್ಕೆಯಾಗಲು ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರನ್ನು ನ. 11ರಂದು ಕಛೇರಿಯಲ್ಲಿ ಸಂಸ್ಥೆಯ ಮುಖ್ಯಸ್ಥ ಫಾದರ್ ವಿನೋದ ಮಸ್ಕರೇನ್ಸ್ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಪಿ ಟಿ ಸೆಬಾಸ್ಟಿಯನ್ ಹಾಗೂ ಪ್ರಮುಖರಾದ ಮಹಮ್ಮದ್ ಹನಿಫ್ ಉಜಿರೆ, ಕುಶಾಲಪ್ಪ ಗೌಡ ಶಿರ್ಲಾಲು, ಮಹಮ್ಮದ್ ಸಿದ್ದಿಕ್ ಕೊಯ್ಯೂರು, ಕೊರಗಪ್ಪ ಪೂಜಾರಿ ಸುಲ್ಕೇರಿ ಉಪಸ್ಥಿತರಿದ್ದರು.

Exit mobile version