ಬೆಳ್ತಂಗಡಿ: ದಶಕಗಳ ಬಳಿಕ ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ನಂತರ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ.
ಮಲೆನಾಡಿನಲ್ಲಿ ಒತ್ತುವರಿ ತೆರವು ಗುಮ್ಮ ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿರುವ ಕೆಂಪು ಉಗ್ರರ ಬಗ್ಗೆ ಪೊಲೀಸರು ಜಾಡು ಹಿಡಿದಿದ್ದಾರೆ ಎನ್ನಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸರು ಹಾಗೂ ಎ.ಎನ್.ಎಫ್ ಪೊಲೀಸರು ನಕ್ಸಲ್ ಬೆಂಬಲಿಗರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜ್ಯ ಗುಪ್ತಚರ ಮಾಹಿತಿ ಆಧಾರದಲ್ಲಿ ನಕ್ಸಲ್ ಬೆಂಬಲಿಗ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಕಳೆದ ಎರಡು ದಿನದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಓರ್ವ ವ್ಯಕ್ತಿಯನ್ನು ಭೇಟಿಯಾಗಲು ಬಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಗಡಿಭಾಗದ ಇಬ್ಬರು ಶಂಕಿತ ವ್ಯಕ್ತಿಗಳ ಬಗ್ಗೆ ರಾಜ್ಯ ಗುಪ್ತಚರ ಇಲಾಖೆಗೆ ಬಂದ ಖಚಿತ ಮಾಹಿತಿ ಆಧಾರದಲ್ಲಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಇಬ್ಬರಿಗೆ ಸಂಬಂಧಿಸಿದ ಸ್ಥಳದಲ್ಲಿ ಶೋಧ ನಡೆಸಿ ನಾಡ ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ಕಾರ್ಕಳ ಎ.ಎನ್.ಎಫ್ ಎಸ್ಪಿ ಹಾಗೂ ಚಿಕ್ಕಮಗಳೂರು ಎಸ್ಪಿ ನೇತೃತ್ವದ ತಂಡದ ಪೊಲೀಸರು ನಕ್ಸಲರಿಗೆ ಮಾಹಿತಿ ಹಾಗೂ ಸಹಕಾರ ಹಿನ್ನಲೆಯಲ್ಲಿ ಇಬ್ಬರು ಶಂಕಿತರಿಗೆ ಸಂಬಂಧಿಸಿದ ಸ್ಥಳದಲ್ಲಿ ಶೃಂಗೇರಿ ಪೊಲೀಸ್ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.